
ಪ್ರಜಾವಾಣಿ ವಾರ್ತೆ
ದಾಬಸ್ ಪೇಟೆ: ಸಾಲ ತೀರಿಸಲಾಗದೇ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾಬಸ್‌ಪೇಟೆಯಲ್ಲಿ ನಡೆದಿದೆ.
ಪಟ್ಟಣದ ಜಯರಾಮು ಬಡಾವಣೆ ನಿವಾಸಿ ಚೇತನ್ (28) ಮೃತಪಟ್ಟ ಯುವಕ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ನಾಲ್ಕೈದು ತಿಂಗಳಿಂದ ನಿರುದ್ಯೋಗಿಯಾಗಿದ್ದ. ಕೆಲವರಿಂದ ಒಂದೂವರೆ ಲಕ್ಷ ಸಾಲ ಪಡೆದಿದ್ದ. ಅದನ್ನು ತೀರಿಸಲಾಗದೆ ಮನನೊಂದು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ದಾಬಸ್‌ಪೇಟೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.