ಕೆ.ಆರ್.ಪುರ: ಹೂಡಿ ಸ್ಪೋರ್ಟ್ ಕ್ಲಬ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮಹಿಳೆಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಹಾವೇರಿ ಜಿಲ್ಲೆ ದ್ವೀತಿಯ, ಮಂಡ್ಯ ಮತ್ತು ಬೆಂಗಳೂರು ನಗರ ಜಿಲ್ಲೆಯ ತಂಡದವರು ತೃತೀಯ ಸ್ಥಾನ ಪಡೆದುಕೊಂಡರು.
ಕರ್ನಾಟಕ ರಾಜ್ಯ ಅಮೆಚೂರ್ ಸಂಸ್ಥೆಯ ಸಹಯೋಗದಲ್ಲಿ ಮೂರು ದಿನಗಳು ನಡೆದ ಹೊನಲು ಬೆಳಕಿನ ಮಹಿಳಾ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 16 ತಂಡಗಳು ಭಾಗವಹಿಸಿದ್ದವು.
ಕ್ಷೀಣಿಸುತ್ತಿರುವ ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಹಿಳೆಯರ ಹೊನಲು ಬೆಳಕಿನ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ ಎಂದು ಆಯೋಜಕ ಹೂಡಿ ಪಿಳ್ಳಪ್ಪ ಹೇಳಿದರು.
ಕಬಡ್ಡಿ ಹೆಮ್ಮೆಯ ರಾಷ್ಟ್ರೀಯ ಕ್ರೀಡೆಯಾಗಿದ್ದು ಗ್ರಾಮೀಣ ಪ್ರದೇಶದ ಮಕ್ಕಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಬೇಕು. ಹಲವಾರು ವರ್ಷಗಳಿಂದ ಕಬಡ್ಡಿ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕ ಅರವಿಂದ ಲಿಂಬಾವಳಿ, ಮಹದೇವಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶ್ರೀಧರ್ ರೆಡ್ಡಿ, ಮುಖಂಡರಾದ ಮನೋಹರ್ ರೆಡ್ಡಿ, ನಟರಾಜ್, ಕೆ.ವಿ.ನಾಗರಾಜ್, ಅಶೋಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.