
ಎಐ ಚಿತ್ರ
ಬೆಂಗಳೂರು: ದಲಿತರು ಉದ್ಯಮಿಗಳಾಗಲು ಇರುವ ದಾರಿಗಳನ್ನು ಶೋಧಿಸಬೇಕು ಎಂದು ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಡಿಐಸಿಸಿಐ) ಬುಡಕಟ್ಟು ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ರಾಜಾನಾಯಕ್ ಹೇಳಿದರು.
ಡಿಐಸಿಸಿಐ ಮತ್ತು ಅದರ ಕರ್ನಾಟಕ ಘಟಕದ ನೇತೃತ್ವದಲ್ಲಿ ಭಾನುವಾರ ನಡೆದ ಉದ್ಯಮ ಜಾಗೃತಿ ಮತ್ತು ಮಹಿಳಾ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ದಲಿತರು ಉದ್ಯಮಿಗಳಾಗಲು ಶ್ರಮವಹಿಸಿ ಕೆಲಸ ಮಾಡಬೇಕು. ನಾವು ತಯಾರಿಸುವ ವಸ್ತುಗಳು ಹೆಚ್ಚು ಗುಣಮಟ್ಟ ಹೊಂದಿದ್ದಾಗ ಮಾತ್ರ ನಮ್ಮ ಬೆಳವಣಿಗೆ ಸಾಧ್ಯ. ಉದ್ಯಮಿಗಳಾಗಲು ಮುಂದೆ ಬಂದರೆ ಉತ್ತಮ ಮಾರ್ಗದರ್ಶನವನ್ನು ಡಿಐಸಿಸಿಐ ನೀಡಲಿದೆ. ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದರು.
ಉದ್ಯಮಿಗಳಾಗುವ ಕನಸು ಕಾಣುವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ಘಟಕದ ಅಧ್ಯಕ್ಷ ಸಿ.ನರಸಿಂಹಮೂರ್ತಿ, ಮಾಜಿ ಅಧ್ಯಕ್ಷ ಬೆಳ್ಳಿ ಗಂಗಾಧರ್, ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಕಬ್ಬೂರು, ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್, ಉದ್ಯಮಿ ರವಿ , ಶ್ರೀಕಾಂತ್ ಕೆ. ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.