ಬೆಂಗಳೂರು: ಕಾಡುಗೋಡಿಯ ದಿನ್ನೂರು ಗ್ರಾಮದಲ್ಲಿ ನೆಲಸಿರುವ ದಲಿತ ರೈತರನ್ನು ಒಕ್ಕಲೆಬ್ಬಿಸುವ ಘಟನೆ ಖಂಡಿಸಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಅರಣ್ಯ ಭೂಮಿ ಎಂಬ ನೆಪದಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ನ್ಯಾಯಾಲಯದ ಆದೇಶ ಪಾಲಿಸದೇ ಕಾಡುಗೋಡಿ ಪ್ಲಾಂಟೇಷನ್ ವ್ಯಾಪ್ತಿಯಲ್ಲಿ ಹಲವಾರು ದಶಕಗಳಿಂದ ವಾಸವಾಗಿರುವ ಬಡರೈತರ ಅಹವಾಲು ಆಲಿಸದೇ ಒಕ್ಕಲೆಬ್ಬಿಸಲಾಗುತ್ತಿದೆ. ಹಲವು ದಶಕಗಳಿಂದ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದವರನ್ನು ಹೊರಕ್ಕೆ ಹಾಕಲಾಗುತ್ತಿದೆ. ಬಡವರ ಜೀವನಾಂಶವನ್ನು ಕಿತ್ತುಕೊಳ್ಳಲಾಗುತ್ತಿದೆ. ದೌರ್ಜನ್ಯ ಎಸಗಿ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಾರಾಯಣಸ್ವಾಮಿ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.