ADVERTISEMENT

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ವಜಾಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 16:20 IST
Last Updated 17 ಜುಲೈ 2025, 16:20 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕಲಾವಿದರೊಂದಿಗೆ ಅಗೌರವದಿಂದ ನಡೆದುಕೊಳ್ಳುವುದರ ಜೊತೆಗೆ ಜಾತಿನಿಂದನೆ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಅವರನ್ನು ವಜಾಗೊಳಿಸಬೇಕು ಎಂದು ದಲಿತಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. 

ಬುಧುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಘಟಕ ಅಧ್ಯಕ್ಷ ಪಿ.ಮೂರ್ತಿ, ‘ಕನ್ನಡ ನಾಡು–ನುಡಿಗೆ, ಸಾಹಿತಿಗಳು, ಕಲಾವಿದರಿಗೆ ಗೌರವ ನೀಡುವವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಹುದ್ದೆಗೆ ನೇಮಕ ಮಾಡಬೇಕು. 31 ಜಿಲ್ಲೆಯ ಕಲಾವಿದರಿಗೆ ಮೂರು ವರ್ಷಗಳಿಂದ ಕಾರ್ಯಕ್ರಮ ಪ್ರದರ್ಶನದ ಹಣ ಪಾವತಿಸಬೇಕು. 2011ರಿಂದ ಇದುವರೆಗೆ ಕಲಾತಂಡಗಳ ಗೌರವ ಸಂಭಾವನೆ ಮೊತ್ತ ಪರಿಷ್ಕರಣೆ ಆಗಿಲ್ಲ. ದಿನಬಳಕೆ ವಸ್ತುಗಳು ಬೆಲೆ ಗಗನಕ್ಕೇರಿದ್ದು, ಇಂತಹ ಪರಿಸ್ಥಿತಿಯಲ್ಲಿ ಕಲಾವಿದರು ಜೀವನ ನಡೆಸುವುದೇ ದುಸ್ತರವಾಗಿದೆ. ಆದ್ದರಿಂದ ಕೂಡಲೇ ಗೌರವ ಸಂಭಾವನೆ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.