ADVERTISEMENT

ದಲಿತ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಕೋಟಿಗಾನಹಳ್ಳಿ ರಾಮಯ್ಯ ಆಯ್ಕೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2025, 16:23 IST
Last Updated 12 ಏಪ್ರಿಲ್ 2025, 16:23 IST
ಕೋಟಿಗಾನಹಳ್ಳಿ ರಾಮಯ್ಯ
ಕೋಟಿಗಾನಹಳ್ಳಿ ರಾಮಯ್ಯ   

ಬೆಂಗಳೂರು: ದಲಿತ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿರುವ ಬೆಂಗಳೂರು ನಗರ ಜಿಲ್ಲಾ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಆಯ್ಕೆಯಾಗಿದ್ದಾರೆ.

ಇದೇ 22ರಂದು ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಬೆಳಿಗ್ಗೆ 8.30ರಿಂದ ಸಮ್ಮೇಳನ ನಡೆಯಲಿದೆ. ಬಿಬಿಎಂಪಿ ಕೇಂದ್ರ ಕಚೇರಿಯಿಂದ ನಯನ ಸಭಾಂಗಣದವರೆಗೆ ನಡೆಯುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಜಾನಪದ ವಿದ್ವಾಂಸ ಬಾನಂದೂರು ಕೆಂಪಯ್ಯ ಚಾಲನೆ ನೀಡಲಿದ್ದಾರೆ. 

ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸಮ್ಮೇಳನ ಉದ್ಘಾಟಿಸುತ್ತಾರೆ. ಮೂರು ವಿಚಾರಗೋಷ್ಠಿ ಹಾಗೂ ಒಂದು ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಗೌಡಗೆರೆ ಮಾಯುಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.