ADVERTISEMENT

ಬೆಂಗಳೂರು | ಶೂ ಎಸೆಯಲು ಯತ್ನ: ಬಂಧನಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2025, 14:32 IST
Last Updated 27 ಅಕ್ಟೋಬರ್ 2025, 14:32 IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು
ಪ್ರಜಾವಾಣಿ ಚಿತ್ರ
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು ಪ್ರಜಾವಾಣಿ ಚಿತ್ರ   

ಬೆಂಗಳೂರು: ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್‌ ಅವರನ್ನು ಬಂಧಿಸಿ, ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಸ್ವಾಭಿಮಾನಿ ಒಕ್ಕೂಟ ಸೋಮವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲು ಹಂಚಿಕೆ ಮಾಡಿ ಈಗಾಗಲೇ ಹೊರಡಿಸಿರುವ ಆದೇಶಕ್ಕೆ ಪೂರಕವಾಗಿ ಮೂಲ ಜಾತಿ, ಪ್ರವರ್ಗದಡಿ ಜಾತಿ ಪ್ರಮಾಣಪತ್ರ ಪಡೆಯಲು ಅವಕಾಶ ಕಲ್ಪಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದರೊಂದಿಗೆ ಒಳಮೀಸಲು ಸಮೀಕ್ಷೆಯಲ್ಲಿ ಮೂಲ ಜಾತಿ ತಿಳಿಸದವರಿಗೂ ಜಾತಿ ಪ್ರಮಾಣಪತ್ರ ಪಡೆಯಲು ಇರುವ ಅಡ್ಡಿ, ಆತಂಕಗಳನ್ನು ನಿವಾರಿಸಲಾಗಿದೆ. ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಜೀವನಹಳ್ಳಿ ನಾರಾಯಣ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಸಂಸ ಮೀಸಲಾತಿ ರಾಜ್ಯ ಘಟಕದ ಅಧ್ಯಕ್ಷ ವೈ.ರಾಜಣ್ಣ, ಜೈಭೀಮ್ ಜನಪರ ವೇದಿಕೆ ಅಧ್ಯಕ್ಷ ಮನೋಜ್ ಕುಮಾರ್, ಅಖಿಲ ಕರ್ನಾಟಕ ದಲಿತ ಕ್ರಿಯಾ ಸಮಿತಿ ಅಧ್ಯಕ್ಷ ಬಾಬು ಜಾಲಹಳ್ಳಿ, ಒಕ್ಕೂಟದ ರಾಜ್ಯ ಉಪಾಧ್ಯಕ್ಷ ರೀಗನ್ ಸ್ಟೀಫನ್, ಮ.ಸು.ಮಣಿ, ದುರ್ಗಾಮೂರ್ತಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.