ADVERTISEMENT

ದಸಂಸ ತಮಟೆ ಚಳವಳಿ ನಾಳೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 19:32 IST
Last Updated 8 ಫೆಬ್ರುವರಿ 2020, 19:32 IST

ಬೆಂಗಳೂರು: ದಲಿತರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಶೇ 30ರಷ್ಟು ಅನುದಾನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿಕರ್ನಾಟಕ ದಲಿತ ಸಂಘರ್ಷ ಸಮಿತಿಯು ಇದೇ 10ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ತಮಟೆ ಚಳವಳಿ ಹಮ್ಮಿಕೊಂಡಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎನ್‌.ಮೂರ್ತಿ, ‘ಕೇಂದ್ರ, ರಾಜ್ಯ ಸರ್ಕಾರಗಳು ದಲಿತರಿಗೆ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗಿವೆ’ ಎಂದು ಟೀಕಿಸಿದರು.

‘ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿಯನ್ನು ಶೇ 30ಕ್ಕೆ ಹೆಚ್ಚಿಸಬೇಕು. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು. ಸುಳ್ಳು ಪ್ರಮಾಣಪತ್ರಗಳ ಮೂಲಕ ದಲಿತರ ಸೌಲಭ್ಯಗಳನ್ನು ಪಡೆಯುತ್ತಿರುವವರ ಮೇಲೆ ಕ್ರಮ ಸೇರಿದಂತೆ 20 ಬೇಡಿಕೆ
ಗಳನ್ನು ಈಡೇರಿಸಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.