ಎಫ್‌ಐಆರ್
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಪಶ್ಚಿಮ ಸಂಚಾರ ವಿಭಾಗದ ವ್ಯಾಪ್ತಿಯಲ್ಲಿ ವ್ಹೀಲಿ ನಡೆಸುತ್ತಿದ್ದವರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಆರು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಲ್ಲದೇ ₹47 ಸಾವಿರ ದಂಡ ವಸೂಲಿ ಮಾಡಲಾಗಿದೆ.
ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಮೇಲ್ಸೇತುವೆ, ವಿವಿಧ ಬಡಾವಣೆಯ ರಸ್ತೆಗಳಲ್ಲಿ ಅಪಾಯಕಾರಿ ವ್ಹೀಲಿ ನಡೆಸುತ್ತಿದ್ದರು. ಕಾರ್ಯಾಚರಣೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.