ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಹರಟೆ ಹೊಡೆಯುತ್ತಿರುವ ದರ್ಶನ್
ಬೆಂಗಳೂರು: ಜೈಲು ಸಿಬ್ಬಂದಿಯ ಅಮಾನತು ಖಂಡಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ 100ಕ್ಕೂ ಹೆಚ್ಚು ಸಿಬ್ಬಂದಿ ಶುಕ್ರವಾರ ಪ್ರತಿಭಟನೆ ನಡೆಸಿದರು.
‘ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಅವರಿಗೆ ವಿಶೇಷ ಆತಿಥ್ಯ ನೀಡಿದ್ದ ಆರೋಪದ ಅಡಿ ಒಂಬತ್ತು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಯಾರೇ ತಪ್ಪು ಮಾಡಿದರೂ ನಮ್ಮನ್ನೇ ಹೊಣೆ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ
(ಕೆಎಸ್‌ಐಎಸ್‌ಎಫ್) ಸಿಬ್ಬಂದಿ ಸಹ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಮ
ಆಗುತ್ತಿಲ್ಲ’ ಎಂದು ಪ್ರತಿಭಟನಕಾರರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.