ADVERTISEMENT

ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2024, 16:33 IST
Last Updated 4 ಡಿಸೆಂಬರ್ 2024, 16:33 IST
<div class="paragraphs"><p>ದರ್ಶನ್‌</p></div>

ದರ್ಶನ್‌

   

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ಮಂಜೂರು ಮಾಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ.

ಪ್ರಾಸಿಕ್ಯೂಷನ್‌ ಪರವಾಗಿ ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಡಿ.6 ಅಥವಾ ಡಿ.9ರಂದು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ಕೊಲೆ ಪ್ರಕರಣದ ಆರೋಪದಲ್ಲಿ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದರು. ಅಲ್ಲಿ ವಿಶೇಷ ಆತಿಥ್ಯ ಪಡೆದ ಆರೋಪ ಮೇರೆಗೆ ದರ್ಶನ್‌ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿತ್ತು. ಜೈಲಿನಲ್ಲಿದ್ದ ಅವಧಿಯಲ್ಲಿ ದರ್ಶನ್‌ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ವೈದ್ಯಕೀಯ ಚಿಕಿತ್ಸೆಗೆ ಜಾಮೀನು ನೀಡುವಂತೆ ದರ್ಶನ್‌ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದ ಬಳಿಕ ಜೈಲಿನಿಂದ ದರ್ಶನ್‌ ಬಿಡುಗಡೆಯಾಗಿ ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ಧಾರೆ.

‘ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ನೀಡಿತ್ತು. ಅನುಮತಿ ನೀಡಿದ ಬೆನ್ನಲ್ಲೇ ಮೇಲ್ಮನವಿ ಸಲ್ಲಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.