ADVERTISEMENT

‘ಸರ್ವೋದಯ’ಕ್ಕೆ ದರ್ಶನ್ ಪುಟ್ಟಣ್ಣಯ್ಯ ಕಾರ್ಯಾಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 0:01 IST
Last Updated 17 ಅಕ್ಟೋಬರ್ 2025, 0:01 IST
ದರ್ಶನ್ ಪುಟ್ಟಣ್ಣಯ್ಯ
ದರ್ಶನ್ ಪುಟ್ಟಣ್ಣಯ್ಯ   

ಬೆಂಗಳೂರು: ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಸರ್ವೋದಯ ಕರ್ನಾಟಕ ಪಕ್ಷದ ಕಾರ್ಯಾಧ್ಯಕ್ಷ
ರನ್ನಾಗಿ ಹಾಗೂ ಮೈಸೂರಿನ ಕರುಣಾಕರ ಬಿ. ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲೀ ಪಾಟೀಲ್ ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಇತ್ತೀಚೆಗೆ ನಡೆದ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ 10 ಜಿಲ್ಲೆಗಳ ಮುಖಂಡರು ಹಾಗೂ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಪಕ್ಷದ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸುವ ಉದ್ದೇಶದಿಂದ ದರ್ಶನ್‌ ಹಾಗೂ ಕರುಣಾಕರ ಬಿ. ಅವರನ್ನು ಸರ್ವಾನುಮತದಿಂದ ನೇಮಕ ಮಾಡಲಾಗಿದೆ’ ಎಂದರು. 

‘ಮುಂಬರುವ ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲೆಡೆ ಸ್ಪರ್ಧೆ ಮಾಡುತ್ತೇವೆ. ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುತ್ತಿದ್ದೇವೆ’ ಎಂದು ತಿಳಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.