ADVERTISEMENT

ಸರ್ಕಾರಿ ಶಾಲೆ, ಆಸ್ಪತ್ರೆ ಅಭಿವೃದ್ಧಿಗೆ ಪಣ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2022, 7:29 IST
Last Updated 20 ನವೆಂಬರ್ 2022, 7:29 IST
ಗುರು ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಕರು
ಗುರು ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಕರು   

ಬೆಂಗಳೂರು: ‘ಸರ್ಕಾರಿ ಶಾಲೆಗಳು ಮತ್ತು ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವಲಯವನ್ನು ಮೀರಿಸುವಂತೆ ಅಭಿವೃದ್ಧಿಪಡಿಸಲು ಪಣತೊಡಲಾಗಿದೆ’ ಎಂದು ಶಾಸಕ ಆರ್.ಮಂಜುನಾಥ್ ಹೇಳಿದರು.

ಶಿಕ್ಷಕರ ಸಮ್ಮಿಲನ ವೇದಿಕೆ, ಆಧ್ಯಾ ವೆಲ್ಫೇರ್ ಸರ್ವಿಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು, 1500 ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

‘ದಾಸರಹಳ್ಳಿ ಕ್ಷೇತ್ರದಲ್ಲಿ ಹಿಂದೆ ಇದ್ದ ದೌರ್ಜನ್ಯದ ವಾತಾವರಣ ಈಗ ಇಲ್ಲ. ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳನ್ನು ನಂ.1 ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಿದ್ದೇನೆ. ಶಿಕ್ಷಣ ಕ್ಷೇತ್ರದಲ್ಲಿನ ಗಣನೀಯ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವುದು ಅತ್ಯಂತ ಶ್ರೇಷ್ಟವಾದ ಕೆಲಸ’ ಎಂದರು. ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಪೂರ್ಣಪ್ರಜ್ಞ ಶಾಲೆಯ ಕಾರ್ಯದರ್ಶಿ ರಾಜಾರಾಮ್, ಶಿಕ್ಷಕರ ಸಮ್ಮಿಲನ ವೇದಿಕೆ ಅಧ್ಯಕ್ಷ ಆರ್.ಜಿ. ಗೋವಿಂದಪ್ಪ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅಂದನಪ್ಪ, ಮುನಿಸ್ವಾಮಣ್ಣ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.