ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಕ್ಯಾಂಟಿನ್‌ಗೆ ಜಿ.ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು: ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಗುರುವಾರ ಡಿಸಿ ಕ್ಯಾಂಟೀನ್‌ಗೆ ದಿಢೀರ್ ಭೇಟಿ ನೀಡಿ ಆಹಾರ ತಯಾರಿಕೆ ಮತ್ತು ಗ್ರಾಹಕರಿಗೆ ಸುರಕ್ಷಿತ ಆಹಾರ ಪೂರೈಕೆ ಕುರಿತು ಪರಿಶೀಲನೆ ನಡೆಸಿದರು.
ಗ್ರಾಹಕರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ, ಕ್ಯಾಂಟೀನ್‌ನಿಂದ ವಿತರಿಸಿದ ತಿಂಡಿಗಳ ಗುಣಮಟ್ಟದ ಬಗ್ಗೆ ಹಾಗೂ ಆಹಾರಕ್ಕೆ ಮಾಲೀಕರು ನಿಗದಿಪಡಿಸಿರುವ ದರಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕೆಲವು ಗ್ರಾಹಕರು ಆಹಾರ ದರ ಪಟ್ಟಿಯ ಸೂಚನಾ ಫಲಕಅಳವಡಿಸದಿರುವ ಬಗ್ಗೆ ಗಮನ ಸೆಳೆದರೆ, ಮತ್ತೆ ಕೆಲವರು ಆಹಾರದ ಅಳತೆ ಪ್ರಮಾಣ ಕಡಿಮೆ ಎಂದು ದೂರಿದರು.
ಈ ಕುರಿತು ಇಲಾಖೆ ಗಮನಹರಿಸಲಿದೆ ಎಂದು ಜಿಲ್ಲಾಧಿಕಾರಿ ಗ್ರಾಹಕರಿಗೆ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ನಾಯಕ್, ತಹಶೀಲ್ದಾರ್ ಪ್ರಶಾಂತ್ ಖಾನಗೌಡ ಪಾಟೀಲ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.