ADVERTISEMENT

ಸುತ್ತೂರು ಶ್ರೀಗಳ ಜತೆ ಡಿಸಿಎಂ ಚರ್ಚೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2021, 21:33 IST
Last Updated 29 ಜೂನ್ 2021, 21:33 IST

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತಿರುವ ಕಾರಣ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಜಯನಗರದಲ್ಲಿರುವ ಮಠದ ಶಾಖಾ ಕೇಂದ್ರದಲ್ಲಿ ಅಶ್ವತ್ಥನಾರಾಯಣ ಅವರು ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಅಂಶಗಳ ಬಗ್ಗೆ ಸ್ವಾಮೀಜಿಯವರಿಗೆ ವಿವರಿಸಿದರು.

ನೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸ್ವಾಮೀಜಿಯವರು, ಈ ವರ್ಷದಿಂದಲೇ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆಗಳಲ್ಲಿ ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತೇವೆ‘ ಎಂದೂ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.