ನಗರದ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಆಯೋಜಿಸಿದ್ದ ಚಿತ್ತರಗಿ ಇಳಕಲ್ ಶ್ರೀ ವಿಜಯಮಾಹಂತೇಶ್ವರ ಸಂಸ್ಥಾನದ ಡಾ. ಮಹಾಂತ ಶಿವಯೋಗಿ ಜಯಂತಿ
ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಮಹಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಒಂದು ದಿನದ ‘ವ್ಯಸನಮುಕ್ತ’ ಆಚರಣೆ, ಆಗಸ್ಟ್ ತಿಂಗಳು ಪೂರ್ತಿ ನಡೆಯುವ ಮೂಲಕ ‘ಮಾಸಾಚರಣೆ’ ಆಗಬೇಕು’ ಎಂದು ಮನೋವಿಜ್ಞಾನಿ ಎ. ಶ್ರೀಧರ್ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಗಾಂಧಿ ಸ್ಮಾರಕ ನಿಧಿ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ನಡೆದ ‘ವ್ಯಸನಮುಕ್ತ ದಿನಾಚರಣೆ’ಯಲ್ಲಿ ಅವರು ಉಪನ್ಯಾಸ ನೀಡಿದರು.
ಸ್ವಯಂ ನಿಯಂತ್ರಣದಿಂದಲೇ ವ್ಯಸನಮುಕ್ತರಾಗಲು ಸಾಧ್ಯವಿದೆ’ ಎಂದು ಅವರು ಅಭಿಪ್ರಾಯಪಟ್ಟರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ‘ವ್ಯಸನಮುಕ್ತ’ ದಿನಾಚರಣೆ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವಂತಾಗಬೇಕು’ ಎಂದು ಸಲಹೆ ನೀಡಿದರು.
ಚಿತ್ತರಗಿ ಇಳಕಲ್ ವಿಜಯಮಹಾಂತೇಶ್ವರ ಸಂಸ್ಥಾನದ ಗುರುಮಹಾಂತ ಸ್ವಾಮೀಜಿ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನುಂ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಎನ್.ಎಸ್.ಮಹೇಶ್, ಗಾಂಧಿ ಸ್ಮಾರಕ ನಿಧಿಯ ಕೋಶಾಧಿಕಾರಿ ಎಚ್.ಬಿ.ದಿನೇಶ್, ಗಾಂಧಿ ಭವನದ ಕಾರ್ಯದರ್ಶಿ ಎಂ.ಸಿ.ನರೇಶ್, ಸದಸ್ಯೆ ಅಬಿದಾ ಬೇಗಂ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.