ADVERTISEMENT

ಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಕಾರಿನಲ್ಲಿ ಮೃತದೇಹ

​ಪ್ರಜಾವಾಣಿ ವಾರ್ತೆ
Published 13 ಮೇ 2022, 21:04 IST
Last Updated 13 ಮೇ 2022, 21:04 IST
ಮೃತದೇಹವಿದ್ದ ಕಾರು
ಮೃತದೇಹವಿದ್ದ ಕಾರು   

ಬೆಂಗಳೂರು: ರಾಜಾಜಿನಗರ ಕೈಗಾರಿಕಾ ಪ್ರದೇಶದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಮಾಗಡಿ ರಸ್ತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘4ನೇ ಅಡ್ಡರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಅಂಬಾಸಿಡರ್ ಕಾರಿನಿಂದ ಶುಕ್ರವಾರ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು, ಕಾರಿನ ಬಳಿ ಹೋಗಿ ನೋಡಿದಾಗ ಮೃತದೇಹ ಕಂಡಿತ್ತು. ನಂತರ ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ಪೊಲೀಸರು ಹೇಳಿದರು.

‘ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆರು ದಿನಗಳ ಹಿಂದೆ ವ್ಯಕ್ತಿ ಮೃತಪಟ್ಟಿರುವ ಶಂಕೆ ಇದ್ದು, ಇದು ಕೊಲೆಯೋ, ಅಸಹಜ ಸಾವೋ ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದೂ ತಿಳಿಸಿದರು.

ADVERTISEMENT

‘ಅಂಬಾಸಿಡರ್ ಕಾರನ್ನು ಎರಡು ವರ್ಷಗಳಿಂದ ರಸ್ತೆಬದಿಯಲ್ಲಿ ನಿಲ್ಲಿಸಲಾಗಿತ್ತು. ಇದೇ ಸ್ಥಳದಲ್ಲಿ ತಿಂಗಳ ಹಿಂದೆಯಷ್ಟೇ ಸಿನಿಮಾ ಚಿತ್ರೀಕರಣ ಮಾಡಿದ್ದ ಕೆಲವರು, ಕಾರಿಗೆ ಬಣ್ಣ ಬಳಿದಿದ್ದರು. ಕಾರಿನ ಮಾಲೀಕರು ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.