ಯಲಹಂಕ: ಉಪನಗರ ವಾರ್ಡಿನ ಬಿಬಿಎಂಪಿ ಮಾಜಿ ಸದಸ್ಯ ಹಾಗೂ ಯಲಹಂಕ ದಿನಪತ್ರಿಕೆ ವಿತರಕರ ಸಂಘದ ಅಧ್ಯಕ್ಷ ಎಂ.ಸತೀಶ್(56) ಅನಾರೋಗ್ಯದಿಂದ ಬುಧವಾರ ನಿಧನರಾದರು.
ಮೃತರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದಾರೆ. ದಿನಪತ್ರಿಕೆ ವಿತರಕರಾಗಿ ಹಾಗೂ ಪತ್ರಿಕಾ ಏಜೆಂಟರಾಗಿ ಕಾರ್ಯನಿರ್ವಹಿಸಿದ್ದ ಅವರು, ಯಲಹಂಕ ದಿನಪತ್ರಿಕೆ ವಿತರಕರ ಸಂಘದ ಅಧ್ಯಕ್ಷರಾಗಿದ್ದರು. ನಂತರ ಯಲಹಂಕ ಉಪನಗರ ವಾರ್ಡ್-4ರ ಬಿಬಿಎಂಪಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಯಲಹಂಕ ಉಪನಗರ ಬಿಜೆಪಿ ಘಟಕದ ಅಧ್ಯಕ್ಷರಾಗಿ ಹಾಗೂ ಎರಡು ಬಾರಿ ಯಲಹಂಕ ನಗರ ಮಂಡಲದ ಅಧ್ಯಕ್ಷರಾಗಿದ್ದರು.
ಯಲಹಂಕ ಉಪನಗರದ ಸೋಮೇಶ್ವರ ನಗರದ ಸ್ವಗೃಹದ ಬಳಿ ಗುರುವಾರ ಬೆಳಿಗ್ಗೆ 11.30 ಗಂಟೆಯವರೆಗೆ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಮಾರಹಳ್ಳಿ ಗ್ರಾಮದ ರುದ್ರಭೂಮಿಯಲ್ಲಿ ಮಧ್ಯಾಹ್ನ 3.30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.