ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7ರಿಂದ15ರವರೆಗೆ ಬೆಂಗಳೂರಿನಲ್ಲೇ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಚಳಿಗಾಲದ ಅಧಿವೇಶನವನ್ನು ಸಾಮಾನ್ಯವಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುತ್ತಿತ್ತು. ಕಳೆದ ವರ್ಷ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಕ್ಕೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲಾಗಿತ್ತು. ಈ ವರ್ಷ ಕೋವಿಡ್ ಕಾರಣದಿಂದ ವಿಧಾನಸೌಧದಲ್ಲೇ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಸಂಪುಟ ಬಳಿಕ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
2021ನೇ ಸಾಲಿನಲ್ಲಿ ಘೋಷಿಸಲಾಗುವ 21 ಸಾರ್ವತ್ರಿಕ ರಜೆ ಹಾಗೂ 19 ನಿರ್ಬಂಧಿತ ರಜೆಗಳ ಪಟ್ಟಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.