ADVERTISEMENT

ಬೆಂಗಳೂರು | ಪಟಾಕಿ ಅವಘಡ: 13 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2022, 20:26 IST
Last Updated 24 ಅಕ್ಟೋಬರ್ 2022, 20:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಬೆಳಕಿನ ಹಬ್ಬ’ ದೀಪಾವಳಿ ವೇಳೆ ರಾಜಧಾನಿಯಲ್ಲಿ ಪಟಾಕಿ ಸಿಡಿತದಿಂದ ಅವಘಡಗಳು ಸಂಭವಿಸುತ್ತಿವೆ.

ಪಟಾಕಿ ಸ್ಫೋಟದಿಂದ ಗಾಯಗೊಂಡ 7 ಮಂದಿ ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಹಾಗೂ ಐವರು ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೇತ್ರಾಲಯದಲ್ಲಿ ಏಳು ಮಂದಿ ಚಿಕಿತ್ಸೆಗೆ ಬಂದಿದ್ದರು. ಮೂವರನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲಾಗಿದೆ. ಇಬ್ಬರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ADVERTISEMENT

ಕಣ್ಣಿಗೆ ಗಾಯವಾಗಿರುವ ಶ್ರೀನಗರದ ಮದನ್‌ (18) ಅವರಿಗೆ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಫ್ರೇಜರ್‌ ಟೌನ್‌ನ ಆದಿತ್ಯ (7) ಹಾಗೂ ಥಣಿಸಂದ್ರದ ಸ್ಯಾಮ್ಯುವಲ್‌ (7) ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.