ಪ್ರಾತಿನಿಧಿಕ ಚಿತ್ರ
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ 14 ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
ಕೆಎಸ್ಆರ್ ಬೆಂಗಳೂರು-ಸಾಂಗ್ಲಿ ರಾಣಿ ಚನ್ನಮ್ಮ–ಕೆಎಸ್‌ಆರ್ ಡೈಲಿ ಎಕ್ಸ್‌ಪ್ರೆಸ್, ಕೆಎಸ್ಆರ್ ಬೆಂಗಳೂರು-ಬೆಳಗಾವಿ–ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್, ಯಶವಂತಪುರ-ಹಜರತ್ ನಿಜಾಮುದ್ದೀನ್– ಯಶವಂತಪುರ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಎಸ್ಎಸ್ಎಸ್ ಹುಬ್ಬಳ್ಳಿ-ಬನಾರಸ್– ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುವರಿಯಾಗಿ ತಲಾ ಒಂದು ಎಸಿ 3-ಟೈರ್ ಬೋಗಿ ಜೋಡಿಸಲಾಗುತ್ತಿದೆ.
ಯಶವಂತಪುರ-ಚಂಡೀಗಢ–ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್, ಯಶವಂತಪುರ-ಪಂಢರಪುರ–ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುವರಿಯಾಗಿ ತಲಾ ಒಂದು ಸ್ಲೀಪರ್ ಕ್ಲಾಸ್ ಬೋಗಿ ಜೋಡಿಸಲಾಗುತ್ತಿದೆ. ಒಂದು ತಿಂಗಳು ಹೆಚ್ಚುವರಿ ಬೋಗಿಗಳು ಇರಲಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.