ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಕಗ್ಗಲೀಪುರ ಅರಣ್ಯ ವಲಯದಲ್ಲಿ ಚುಕ್ಕೆ ಜಿಂಕೆ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ತಲೆಮರೆಸಿಕೊಂಡಿದ್ದ ರಮೇಶ್ ಎಂಬಾತನನ್ನು ಅರಣ್ಯ ಇಲಾಖೆ ಬಂಧಿಸಿದೆ.
ಖಚಿತ ಮಾಹಿತಿ ಮೇರೆಗೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಬಂಟಹಳ್ಳಿ ತೋಟದ ಜಮೀನಿನ ಶೆಡ್‌ನಲ್ಲಿದ್ದ ಆರೋಪಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ನಾಪತ್ತೆಯಾಗಿರುವ ಮತ್ತೊಬ್ಬ ಆರೋಪಿ ಬಾಲರಾಜು ಪತ್ತೆ ಕಾರ್ಯ ನಡೆಯುತ್ತಿದೆ.
ಜಾಮೀನು ಕೋರಿ ರಮೇಶ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ. ಇದಕ್ಕೆ ಅರಣ್ಯ ಇಲಾಖೆ ವಿರೋಧ ವ್ಯಕ್ತಪಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.