ADVERTISEMENT

ರಕ್ಷಣಾ ಇಲಾಖೆ ಭೂಮಿ ಹಸ್ತಾಂತರ ಇಂದು

ನನೆಗುದಿಗೆ ಬಿದ್ದಿದ್ದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2019, 20:03 IST
Last Updated 4 ಮಾರ್ಚ್ 2019, 20:03 IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 8 ಕಡೆ ನಾಗರಿಕ ಮೂಲಸೌಕರ್ಯ ಅಭಿವೃದ್ಧಿಪಡಿಸಲು ರಕ್ಷಣಾ ಇಲಾಖೆ ಮಂಗಳವಾರ ಜಾಗ ಹಸ್ತಾಂತರಿಸಲಿದೆ.

ಮೂಲಸೌಕರ್ಯ ಅಭಿವೃದ್ಧಿಗಾಗಿ 8 ಕಡೆ ಜಾಗ ಹಸ್ತಾಂತರಿಸಲು ರಕ್ಷಣಾ ಇಲಾಖೆ ಫೆ. 26ರಂದು ಕಾರ್ಯಾನುಮತಿ ನೀಡಿತ್ತು. ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್‌ ಅವರು ಮಂಗಳವಾರ ಅಧಿಕೃತವಾಗಿ ಜಾಗವನ್ನು ಹಸ್ತಾಂತರ ಮಾಡಲಿದ್ದಾರೆ. ಈ ಸಲುವಾಗಿ ಮೋದಿ ಗಾರ್ಡನ್‌ ಬಳಿ ಸಂಜೆ 5.30ಕ್ಕೆ ಸಮಾರಂಭ ಏರ್ಪಡಿಸಲಾಗಿದೆ.

ಕೋರಮಂಗಲ100 ಅಡಿ ರಸ್ತೆಯಲ್ಲಿ ನಿರ್ಮಿಸುತ್ತಿರುವ ಎಲಿವೇಟೆಡ್‌ ಕಾರಿಡಾರ್‌ನ ಸ್ಲಿಪ್‌ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

ADVERTISEMENT

ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭಾಗವಹಿಸಲಿದ್ದಾರೆ.

ಮೆಟ್ರೊ: ಸುರಂಗದ ಕಾಮಗಾರಿಗೆ ಇಂದು ಚಾಲನೆ

ನಮ್ಮ ಮೆಟ್ರೊ ಎರಡನೇ ಹಂತದ ಸುರಂಗ ಮಾರ್ಗದಲ್ಲಿ ನಿರ್ಮಾಣವಾಗಲಿರುವ ವೆಲ್ಲಾರ ಜಂಕ್ಷನ್‌ ಹಾಗೂ ಎಂ.ಜಿ.ರಸ್ತೆ ನಿಲ್ದಾಣಗಳ ಕಾಮಗಾರಿಗಳಿಗೆ ಮಂಗಳವಾರ ಸಂಜೆ 5.30ಕ್ಕೆ ಶಂಕುಸ್ಥಾಪನೆ ಹಮ್ಮಿಕೊಳ್ಳಲಾಗಿದೆ.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಕೇಂದ್ರ ನಗರ ವ್ಯವಹಾರಗಳ ಸಚಿವ ಹರ್ದೀಪ್‌ ಸಿಂಗ್‌ ಪುರಿ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.ನಾಗವಾರದಿಂದ ಪಾಟರಿಟೌನ್‌ವರೆಗೆ ಹಾಗೂ ವೆಲ್ಲಾರ ಜಂಕ್ಷನ್‌ನಿಂದ ಡೇರಿ ವೃತ್ತದವರೆಗಿನ ಸುರಂಗ ಮಾರ್ಗದ ಕಾಮಗಾರಿಯ ಎರಡು ಪ್ಯಾಕೇಜ್‌ಗಳ ಟೆಂಡರ್‌ ಪ್ರಕ್ರಿಯೆ ಜಾರಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.