ADVERTISEMENT

ಭಾಷಾ ವಿಷಯ: ನಿಮ್ಮ ಆಯ್ಕೆ– ನಿಮ್ಮದೇ ಹೊಣೆ !

ಪದವಿಯಲ್ಲಿ ಐದಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದರೆ ಆ ವಿಷಯಕ್ಕೆ ಉಪನ್ಯಾಸಕರನ್ನು ನೀಡುವುದಿಲ್ಲ

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 6:40 IST
Last Updated 24 ಜುಲೈ 2020, 6:40 IST

ಬೆಂಗಳೂರು: ಪದವಿಯಲ್ಲಿ ಭಾಷಾ ವಿಷಯ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಐದಕ್ಕಿಂತ ಕಡಿಮೆ ಇದ್ದರೆ, ಆ ವಿಷಯ ಬೋಧನೆಗೆಯಾವುದೇ ಉಪನ್ಯಾಸಕರನ್ನು ನೀಡುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

‘ವಿದ್ಯಾರ್ಥಿಗಳೇ ಆಯಾ ಭಾಷಾ ವಿಷಯ ಅಭ್ಯಾಸ ಮಾಡಿಕೊಳ್ಳಬೇಕು. ಅವರೇ ಪರೀಕ್ಷೆ ಎದುರಿಸಬೇಕು’ ಎಂದು ಸುತ್ತೋಲೆ ಹೊರಡಿಸಲಾಗಿದ್ದು, ಈ ಕುರಿತು ಎಲ್ಲ ಸರ್ಕಾರಿ ಪದವಿ ಕಾಲೇಜುಗಳ ಪ್ರಾಚಾರ್ಯರಿಗೆ ಸೂಚನೆ ನೀಡಿದೆ.

‘2020–21ರ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಅನ್ವಯವಾಗಲಿದೆ. ಮುಖ್ಯವಾಗಿ ಭಾಷಾ ವಿಷಯಗಳಿಗೆ ಇದು ಅನ್ವಯಿಸಲಿದೆ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ADVERTISEMENT

‘ಪದವಿ ಕೋರ್ಸ್‌ಗಳಲ್ಲಿ ಭಾಷೆಯನ್ನು ಮುಖ್ಯ ವಿಷಯವನ್ನಾಗಿ ಆಯ್ಕೆ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಅತಿ ಕಡಿಮೆ ಇರುತ್ತದೆ. ಕೆಲವು ಬಾರಿ ಒಬ್ಬರೋ, ಇಬ್ಬರೋ ಮಾತ್ರ ಆಯ್ಕೆ ಮಾಡಿಕೊಂಡಿರುತ್ತಾರೆ. ಕಡಿಮೆ ವಿದ್ಯಾರ್ಥಿಗಳಿಗೆ ಉಪನ್ಯಾಸಕರನ್ನು ನಿಯೋಜಿಸುವುದು ಇಲಾಖೆಗೆ ಹೊರೆಯಾಗುತ್ತದೆ. ಹೀಗಾಗಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.