ADVERTISEMENT

ಅಲೆಮಾರಿಗಳಿಂದ ಗಾಂಧಿ ಜಯಂತಿಯಂದು ದೆಹಲಿ ಚಲೊ ಅ.2ಕ್ಕೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2025, 14:16 IST
Last Updated 29 ಸೆಪ್ಟೆಂಬರ್ 2025, 14:16 IST
<div class="paragraphs"><p>ಸಂಸತ್ ಭವನ</p></div>

ಸಂಸತ್ ಭವನ

   

ಬೆಂಗಳೂರು: ‘ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಆಗಿರುವ ಅನ್ಯಾಯವನ್ನು ಖಂಡಿಸಿ ಅಕ್ಟೋಬರ್‌ 2ರ ಗಾಂಧಿ ಜಯಂತಿಯಂದು ದೆಹಲಿ ಚಲೊ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ‌ ಒಕ್ಕೂಟದ ಅಧ್ಯಕ್ಷ ಶೇಷಪ್ಪ ಅಂದೋಳ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಇದೆ. ಅಲೆಮಾರಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೋರುತ್ತೇವೆ’ ಎಂದು ಹೇಳಿದರು.

ADVERTISEMENT

‘ಹಿಂದಿನ ಎಲ್ಲ ಆಯೋಗಗಳು ಅಲೆಮಾರಿಗಳಿಗೆ ಶೇಕಡ 1ರಷ್ಟು ಮೀಸಲಿಟ್ಟಿದ್ದರು. ನ್ಯಾಯಮೂರ್ತಿ ನಾಗಮೋಹನದಾಸ್‌ ಆಯೋಗವೂ ಶೇ 1ರಷ್ಟು ಮೀಸಲಾತಿ ನೀಡಲು ಶಿಫಾರಸು ಮಾಡಿತ್ತು. ಆದರೆ, ಒಳಮೀಸಲಾತಿ ಅನುಷ್ಟಾನಕ್ಕೆ ತರುವಾಗ ರಾಜ್ಯ ಸರ್ಕಾರವು ಈ ಮೀಸಲಾತಿಯನ್ನು ಸ್ಪರ್ಶ ಜಾತಿಗಳ ಗುಂಪಿಗೆ ಸೇರಿಸಿ 49 ಅಲೆಮಾರಿ ಸಮುದಾಯಗಳಿಗೆ 10 ಸೂಕ್ಷ್ಮ ಸಮುದಾಯಗಳಿಗೆ ಅನ್ಯಾಯವೆಸಗಿದೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಅಲೆಮಾರಿ ಸಮುದಾಯದ ಹೋರಾಟಗಾರ ಚಿನ್ನ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.