ADVERTISEMENT

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ನಾಲ್ಕು ಕಡೆ ದೆಹಲಿ ಮಾದರಿ ಶಾಲೆ: ಕೆ.ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 21:17 IST
Last Updated 7 ಜನವರಿ 2023, 21:17 IST
ಪಶ್ಚಿಮ ಕಾರ್ಡ್ ರಸ್ತೆಯ ಅಂಬೇಡ್ಕರ್ ಮೆಮೊರಿಯಲ್ ಸೊಸೈಟಿ ಶಾಲಾ ವಾರ್ಷಿಕೋತ್ಸವದಲ್ಲಿ ಸಚಿವ ಕೆ.ಗೋಪಾಲಯ್ಯ ಮಾತನಾಡಿದರು 
ಪಶ್ಚಿಮ ಕಾರ್ಡ್ ರಸ್ತೆಯ ಅಂಬೇಡ್ಕರ್ ಮೆಮೊರಿಯಲ್ ಸೊಸೈಟಿ ಶಾಲಾ ವಾರ್ಷಿಕೋತ್ಸವದಲ್ಲಿ ಸಚಿವ ಕೆ.ಗೋಪಾಲಯ್ಯ ಮಾತನಾಡಿದರು    

ಬೆಂಗಳೂರು: ‘ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗ ಬಾರದು ಎನ್ನುವ ಉದ್ದೇಶದಿಂದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸ್ಥಳದಲ್ಲಿ ದೆಹಲಿ ಮಾದರಿ ಸರ್ಕಾರಿ ಶಾಲೆ ನಿರ್ಮಿಸಲಾಗಿದೆ’ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು.

ಪಶ್ಚಿಮ ಕಾರ್ಡ್ ರಸ್ತೆಯ ಅಂಬೇಡ್ಕರ್ ಮೆಮೊರಿಯಲ್ ಸೊಸೈಟಿ ಶಾಲಾ ವಾರ್ಷಿಕೋತ್ಸವ
ದಲ್ಲಿ ಅವರು ಮಾತನಾಡಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಲಾನಗರದ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ನಂದಿನಿ ಬಡಾವಣೆಯ ಕೃಷ್ಣಾನಂದ ನಗರದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಿ, ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ADVERTISEMENT

ಡಿಡಿಪಿಯು ಬಿ‌.ಕೆ.ಶ್ರೀರಾಮ್, ಚಾಲೆಂಜರ್ಸ್ ಯೂತ್ ಅಸೋಸಿಯೇಷನ್ ಅಧ್ಯಕ್ಷ ಎಂ.ಮನೋಜ್, ಅಂಬೇಡ್ಕರ್ ಮೆಮೊರಿಯಲ್ ಸೊಸೈಟಿ ಅಧ್ಯಕ್ಷ ಡಾ.ರವಿಪ್ರಕಾಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.