ADVERTISEMENT

ಬೆಂಗಳೂರು: ಫುಡ್ ಡೆಲಿವರಿ ಯುವಕನ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 16:22 IST
Last Updated 14 ಜುಲೈ 2025, 16:22 IST
   

ಬೆಂಗಳೂರು: ರಾಜಾಜಿನಗರದ ಮೋದಿ ಆಸ್ಪತ್ರೆ ಜಂಕ್ಷನ್‌ನಲ್ಲಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಫುಡ್ ಡೆಲಿವರಿ ಕೆಲಸ ಮಾಡುವ ಹುಡುಗನ ಮೇಲೆ ಮೂವರು ಹಲ್ಲೆ ನಡೆಸಿ ಪರಾರಿ ಆಗಿದ್ದಾರೆ.

ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಹುಡುಗ ಸಿಗ್ನಲ್​​ನಲ್ಲಿ ಕೆಂಪು ಲೈಟ್ ಇದೆ ಎಂದು ಬೈಕ್ ನಿಲುಗಡೆ ಮಾಡಿಕೊಂಡಿದ್ದರು. ಅದೇ ವೇಳೆ ಹಿಂದಿನಿಂದ ಕಾರಿನಲ್ಲಿ ಬಂದು ಮೂವರು ಅಪರಿಚಿತರು ದಾರಿ ಬಿಡುವಂತೆ ಹೇಳಿದ್ದರು. ಆಗ ಡೆಲಿವರಿ ಕೆಲಸ ಮಾಡುತ್ತಿದ್ದ ಹುಡುಗ, ‘ರೆಡ್‌ ಸಿಗ್ನಲ್‌ ಇದೆ. ಹೇಗೆ ಮುಂದಕ್ಕೆ ಹೋಗುವುದು’ ಎಂದು ಹೇಳಿದ್ದ. ಆಗ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಲಾಗಿದೆ. ಈ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮೂವರು ಆರೋಪಿಗಳು ಹಲ್ಲೆ ನಡೆಸಿ ಪರಾರಿ ಆಗಿದ್ದರು. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಡೆಲಿವರಿ ಹುಡುಗನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ADVERTISEMENT

ಹಲ್ಲೆಗೆ ಒಳಗಾದ ಯುವಕ ನೀಡಿದ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಲ್ಲೆ ನಡೆಸಿದವರು ಮದ್ಯದ ಅಮಲಿನಲ್ಲಿ ಕೃತ್ಯ ಎಸಗಿರುವ ಸಾಧ್ಯತೆಯಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.