ADVERTISEMENT

ಪ್ರತ್ಯೇಕ ಮಕ್ಕಳ ಇಲಾಖೆ ರಚನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2018, 20:44 IST
Last Updated 9 ನವೆಂಬರ್ 2018, 20:44 IST

ಬೆಂಗಳೂರು:‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ, ಈಗಿರುವ ಮಹಿಳಾ ಮತ್ತು ಮಕ್ಕಳ ಸಚಿವಾಲಯವನ್ನು ಇಬ್ಭಾಗಗೊಳಿಸಿ, ಮಕ್ಕಳಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಪ್ರಾರಂಭಿಸಬೇಕು’ ಎಂದು ಕ್ರಿಸ್ಪ್‌ ಸಂಸ್ಥೆಯ ನೀರಜ್‌ ಆಗ್ರಹಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪೊಕ್ಸೊ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಪೊಲೀಸ್‌ ಠಾಣೆ ಮತ್ತು ಸರ್ಕಾರಿ ಕಚೇರಿಗಳಲ್ಲಿ ಪೋಸ್ಟರ್‌ಗಳ ಮೂಲಕ ಜಾಗೃತಿ ಮೂಡಿಸಬೇಕು’ ಎಂದರು.

‘ಗಾರ್ಡಿಯನ್ಸ್‌ ಆ್ಯಂಡ್‌ ವಾರ್ಡ್ಸ್ ಕಾಯಿದೆಗೆ ಕೂಡಲೇ ತಿದ್ದುಪಡಿ ತಂದು, ತಂದೆ–ತಾಯಿ ಇಬ್ಬರಿಗೂ ಮಕ್ಕಳ ಸಮಾನಾದ ಪೋಷಣೆಯ ಅವಕಾಶವನ್ನು ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಈ ಬಾರಿಯ ಮಕ್ಕಳ ದಿನಾಚರಣೆ ನಿಮಿತ್ತ, ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ’ ಎಂದು ಕ್ರಿಸ್ಪ್ ಸಂಸ್ಥೆಯ ಸಂಸ್ಥಾಪಕ ಕುಮಾರ್‌ ಜಹಗೀರ್‌ದಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.