ಕೆ.ಆರ್.ಪುರ: ‘ಅಯ್ಯಪ್ಪನಗರದಲ್ಲಿ ಹೈಟೆನ್ಷನ್ ವಿದ್ಯುತ್ ಪ್ರವಹಿಸಿ 10 ವರ್ಷದ ಬಾಲಕ ಮೃತಪಟ್ಟಿದ್ದು, ಇದಕ್ಕೆ ಕಾರಣರಾದ ಬೆಸ್ಕಾಂ ಹಾಗೂ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಮತಾ ಸೈನಿಕ ದಳದ ಕಾರ್ಯಕರ್ತರು ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಮತಾ ಸೈನಿಕ ದಳ ಯುವ ಘಟಕದ ಪ್ರಧಾನ ಕಾರ್ಯದರ್ಶಿ ದಲಿತ ಚಳವಳಿ ನಾಗೇಶ್ ಮಾತನಾಡಿ, ‘ನೇಪಾಳದ ತುಲಾವೋರ್ ಮತ್ತು ದೊಡ್ಡಪ್ಪದೇವ ದಂಪತಿಯ ಪುತ್ರ ಅನಂತ್, ಹೈಟೆನ್ಷನ್ ವಿದ್ಯುತ್ ಪ್ರವಹಿಸಿ ಪ್ರಾಣ ಕಳೆದುಕೊಂಡು 15 ದಿನ ಕಳೆದರೂ ಬೆಸ್ಕಾ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದರು.
‘ಕೆ.ಆರ್.ಪುರದಲ್ಲಿ ಹಾದುಹೋಗಿರುವ ಹೈಟೆನ್ಷನ್ ಲೈನ್‌ನಿಂದಾಗಿ ಹತ್ತಕ್ಕೂ ಹೆಚ್ಚು ಅಮಾಯಕರು ಜೀವ ಕಳೆದುಕೊಂಡಿದ್ದಾರೆ. ಆದರೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಪೊಲೀಸರು ಸಹ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಕಿಡಿಕಾರಿದರು.
ಪದಾಧಿಕಾರಿಗಳಾದ ಅಂಬರೀಶ್, ಶೋಭಾ, ಕೃಷ್ಣ, ಸಂತೋಷ್, ನವೀನ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.