ಬೆಂಗಳೂರು: ರಾಜ್ಯದಲ್ಲಿರುವ ದೇವಾಡಿಗ ಸಮುದಾಯದ ಏಳಿಗೆಗಾಗಿ ದೇವಾಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಬೆಂಗಳೂರು ದೇವಾಡಿಗ ಸಂಘ ಒತ್ತಾಯಿಸಿದೆ.
ಸಂಘದ ರಜನಿಕಾಂತ್, ‘ಉಡುಪಿ ಬಾರ್ಕೂರಿನ ಏಕನಾಥೇಶ್ವರಿ ದೇವಸ್ಥಾನದಲ್ಲಿ ನಡೆದ ದೇವಾಡಿಗ ಸಂಘಗಳ ಪದಾಧಿಕಾರಿಗಳು ಹಾಗೂ ದೇವಾಡಿಗ ಸಮಾಜದ ಮುಖಂಡರ ಸಭೆಯಲ್ಲಿ ಸಮುದಾಯಕ್ಕೆ ನಿಗಮ ರಚಿಸುವ ಸಂಬಂಧ ಒತ್ತಡ ಹೇರಲು ತೀರ್ಮಾನಿಸಲಾಯಿತು’ ಎಂದರು.
‘ಶೀಘ್ರವೇ ಸಮುದಾಯದ ನಿಯೋಗ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.