ADVERTISEMENT

ಆಂಗ್ಲ ಭಾಷೆಯಲ್ಲಿ video: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2025, 19:56 IST
Last Updated 18 ಆಗಸ್ಟ್ 2025, 19:56 IST
<div class="paragraphs"><p>ಬಿಬಿಎಂಪಿ</p></div>

ಬಿಬಿಎಂಪಿ

   

ಬೆಂಗಳೂರು: ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ  ಕೇವಲ ಆಂಗ್ಲ ಭಾಷೆಯಲ್ಲಿ ವಿಡಿಯೊ ಮಾಡಿ ಕನ್ನಡವನ್ನು ನಿರ್ಲಕ್ಷಿಸಿರುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.

ಆಸ್ತಿ ತೆರಿಗೆ ಪಾವತಿಸುವಂತೆ ಸಾರ್ವಜನಿಕರಿಗೆ ಬಿಬಿಎಂಪಿ ನೋಟಿಸ್‌ ನೀಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸುವ ವಿಧಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಮೂಲಕ ಮಾಹಿತಿ ನೀಡಲಾಗಿದೆ. ಅದು ಪೂರ್ಣ ಆಂಗ್ಲಮಯವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

ಕನ್ನಡಕ್ಕೆ ಆದ್ಯತೆ ಕಲ್ಪಿಸುವುದು ಬಿಬಿಎಂಪಿಯ ಜವಾಬ್ದಾರಿ ಆಗಿದ್ದರೂ ಆಂಗ್ಲಭಾಷೆಯಲ್ಲಿ ಮಾಹಿತಿ ನೀಡಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆಯ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರಿಗೆ ಬಿಳಿಮಲೆ ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.