ADVERTISEMENT

ಪಿಂಚಣಿ ಪರಿಷ್ಕರಣೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2022, 18:20 IST
Last Updated 4 ಡಿಸೆಂಬರ್ 2022, 18:20 IST
ಲಾಲ್‌ಬಾಗ್‌ನಲ್ಲಿ ಇಪಿಎಸ್ ನಿವೃತ್ತ ನೌಕರರ ಸಭೆ ನಡೆಸಿದರು. ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ಶ್ರೀಪಾದರೇಣು, ಸಂಘದ ಅಧ್ಯಕ್ಷ ಶಂಕರಕುಮಾರ್, ಕಾರ್ಯಾಧ್ಯಕ್ಷ ನಂಜುಂಡೇಗೌಡ, ಉಪಾಧ್ಯಕ್ಷ ಸುಬ್ಬಣ್ಣ, ಕಾರ್ಯದರ್ಶಿ ರಂಗನಾಥ್ ಇದ್ದರು.
ಲಾಲ್‌ಬಾಗ್‌ನಲ್ಲಿ ಇಪಿಎಸ್ ನಿವೃತ್ತ ನೌಕರರ ಸಭೆ ನಡೆಸಿದರು. ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ಶ್ರೀಪಾದರೇಣು, ಸಂಘದ ಅಧ್ಯಕ್ಷ ಶಂಕರಕುಮಾರ್, ಕಾರ್ಯಾಧ್ಯಕ್ಷ ನಂಜುಂಡೇಗೌಡ, ಉಪಾಧ್ಯಕ್ಷ ಸುಬ್ಬಣ್ಣ, ಕಾರ್ಯದರ್ಶಿ ರಂಗನಾಥ್ ಇದ್ದರು.   

ಬೆಂಗಳೂರು: 1995ರ ನೌಕರರ ಪಿಂಚಣಿ ಯೋಜನೆಯಡಿ(ಇಪಿಎಸ್-95) ನೌಕರರ ಪಿಂಚಣಿ ಪರಿಷ್ಕರಣೆ ಬಗ್ಗೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಅನುಷ್ಠಾನ ವಿಳಂಬ ಮಾಡಿದರೆ ಹೋರಾಟಕ್ಕೆ ಇಳಿಯಲು ಇಪಿಎಸ್‌–95 (ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ) ನಿವೃತ್ತ ನೌಕರರು ನಿರ್ಧರಿಸಿದರು.

ಲಾಲ್‌ಬಾಗ್‌ನಲ್ಲಿ ಭಾನುವಾರ ಸಭೆ ನಡೆಸಿದ ನಿವೃತ್ತ ನೌಕರರು, ‘ಸುಪ್ರೀಂ ಕೋರ್ಟ್‌ ತೀರ್ಪು ನೀಡಿ ಒಂದು ತಿಂಗಳಾದರೂ ಪಿಂಚಣಿ ಪರಿಷ್ಕರಣೆಗೆ ನೌಕರರ ಭವಿಷ್ಯ ನಿಧಿ ಸಂಘಟನೆಯು(ಇಪಿಎಫ್ಒ) ಯಾವುದೇ ಕ್ರಮ ಕೈಗೊಂಡಿಲ್ಲ. ಪಿಂಚಣಿದಾರರಿಗೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುಪ್ರೀಂ ಕೋರ್ಟ್ ನೀಡಿರುವ ಎಂಟು ವಾರಗಳ ಗಡುವಿನೊಳಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ಹೋರಾಟಕ್ಕೆ ಸಿದ್ಧರಾಗುವುದಾಗಿ ಎಚ್ಚರಿಸಿದರು.

ADVERTISEMENT

ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ಶ್ರೀಪಾದರೇಣು, ಸಂಘದ ಅಧ್ಯಕ್ಷ ಶಂಕರ್‌ಕುಮಾರ್, ಕಾರ್ಯಾಧ್ಯಕ್ಷ ನಂಜುಂಡೇಗೌಡ, ಉಪಾಧ್ಯಕ್ಷ ಸುಬ್ಬಣ್ಣ, ಕಾರ್ಯದರ್ಶಿ ರಂಗನಾಥ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.