ADVERTISEMENT

ಪದವಿ ಪರೀಕ್ಷೆ ಮುಂದೂಡುವಂತೆ ಕೋರಿ ಸರ್ಕಾರಕ್ಕೆ ಪತ್ರ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2022, 20:54 IST
Last Updated 10 ಫೆಬ್ರುವರಿ 2022, 20:54 IST
   

ಬೆಂಗಳೂರು: ಕೋವಿಡ್‌ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದ ಬೋಧನಾ ಕಾರ್ಯ ಅಪೂರ್ಣವಾಗಿರುವ ಕಾರಣ ಪದವಿ ಕೋರ್ಸುಗಳ ಸೆಮಿಸ್ಟರ್ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳು ಮುಂದೂಡುವಂತೆ ಕೋರಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಅವರು ಗುರುವಾರ ಪತ್ರ ಬರೆದಿದ್ದಾರೆ.

‘ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ. ಆದರೆ, ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡುವಂತೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೂ ನಿರ್ದೇಶಿಸಬೇಕು' ಎಂದು ಅವರು ಮನವಿ ಮಾಡಿದ್ದಾರೆ. ಬಹುತೇಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪಾಠ– ಪ್ರವಚನ ಮುಗಿಯವ ಮೊದಲೇ ಮೊದಲ ಸೆಮಿಸ್ಟರ್‌ ಪೂರ್ಣಗೊಳಿಸಿ, ಪರೀಕ್ಷೆಗಳನ್ನು ನಡೆಸಲು ಮುಂದಾದ ಬಗ್ಗೆ ‘ಪ್ರಜಾವಾಣಿ’ಯ ಫೆ.6ರ ಸಂಚಿಕೆಯಲ್ಲಿ ‘ಪಾಠವೇ ಮುಗಿದಿಲ್ಲ: ಪರೀಕ್ಷೆಗೆ ಆತುರ’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT