ADVERTISEMENT

ನ್ಯಾ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹ: ಉದ್ಯಾನ ತಲುಪಿದ ಬೃಹತ್ ರ‌್ಯಾಲಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 7:57 IST
Last Updated 8 ಮಾರ್ಚ್ 2021, 7:57 IST
ಬೆಂಗಳೂರಿನ ಉದ್ಯಾನದಲ್ಲಿ ಸೇರಿರುವ ಪ್ರತಿಭಟನಕಾರರು
ಬೆಂಗಳೂರಿನ ಉದ್ಯಾನದಲ್ಲಿ ಸೇರಿರುವ ಪ್ರತಿಭಟನಕಾರರು   

ಬೆಂಗಳೂರು:'ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಬೇಕು' ಎಂದು ಆಗ್ರಹಿಸಿ ನಗರದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ‌್ಯಾಲಿ ಸ್ವಾತಂತ್ರ್ಯ ಉದ್ಯಾನ ತಲುಪಿದೆ.

ನಗರದ ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಉದ್ಯಾನದವರೆಗೂ ಈ ರ‌್ಯಾಲಿ ನಡೆಯಿತು. ಸಾವಿರಾರು ಮಂದಿ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ‌.

'ನ್ಯಾ. ಸದಾಶಿವ ವರದಿ ಜಾರಿ ಹೋರಾಟ ಸಮಿತಿ' ವತಿಯಿಂದ ಮಾದಿಕ ಚೈತನ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಬಹಿರಂಗ ಸಭೆ ನಡೆಸಲಾಗುತ್ತಿದೆ. ಉದ್ಯಾನದಲ್ಲಿ ಜಮಾಯಿಸಿರುವ ಜನ, ಸದಾಶಿವ ವರದಿ ಜಾರಿಗೆ ಆಗ್ರಹಿಸಿ ಘೋಷಣೆ ಕೂಗುತ್ತಿದ್ದಾರೆ.

ADVERTISEMENT

'ಆರು ವರ್ಷಗಳ ಹಿಂದೆಯೇ ನ್ಯಾ. ಸದಾಶಿವ ಆಯೋಗ ವರದಿ ನೀಡಿದೆ.ಅದನ್ನು ಜಾರಿಗೊಳಿಸಲು ಸರ್ಕಾರ ಹಿಂದೇಟು ಹಾಕುತ್ತಿದ್ದು, ಇದನ್ನು ನಾವೆಲ್ಲರೂ ತೀವ್ರವಾಗಿ ಖಂಡಿಸುತ್ತೇವೆ' ಎಂದು ಪ್ರತಿಭಟನಕಾರರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.