ADVERTISEMENT

ಬೆಂಗಳೂರು | ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2023, 14:40 IST
Last Updated 24 ಡಿಸೆಂಬರ್ 2023, 14:40 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ‘ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್‌ರನ್ನು ಬಂಧಿಸಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು’ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್‌ಎಸ್‌) ರಾಜ್ಯ ಸಮಿತಿ ಆಗ್ರಹಿಸಿದೆ.

‘ಮಹಿಳಾ ಕುಸ್ತಿಪಟುಗಳ ಲೈಂಗಿಕ ದೌರ್ಜನ್ಯದ ಆಪಾದನೆ ಹೊತ್ತಿರುವ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ. ಪೋಕ್ಸೊ ದೂರು ನೀಡಿದ್ದ ಹುಡುಗಿಯನ್ನು ಹೆದರಿಸಿ ‍ಪ್ರಕರಣ ಹಿಂತೆಗೆದುಕೊಳ್ಳುವಂತೆ ಮಾಡಲಾಗಿದೆ. ಹೀಗಿದ್ದರೂ ಆಪಾದಿತ ಬ್ರಿಜ್‌ಭೂಷಣ್ ಶರಣ್ ಸಿಂಗ್‌ರ ಆಪ್ತ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ಮಾಡಿರುವುದರಿಂದ ನೊಂದ ಕುಸ್ತಿಪಟುಗಳನ್ನು ಸಂಪೂರ್ಣ ಹತಾಶರನ್ನಾಗಿ ಮಾಡಿದೆ’ ಎಂದು ಎಐಎಂಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ಶೋಭಾ ಎಸ್. ಹೇಳಿದ್ದಾರೆ.

ADVERTISEMENT

‘ಕುಸ್ತಿಯಲ್ಲಿ ದೇಶಕ್ಕೆ ಒಲಿಂಪಿಕ್ಸ್‌ ಪದಕ ತಂದು, ದೇಶಕ್ಕೆ ಹೆಮ್ಮೆ, ಗೌರವ ತಂದಿರುವ ಸಾಕ್ಷಿ ಮಲ್ಲಿಕ್ ತಮ್ಮ ಅತಿಪ್ರೀತಿಯ ಕ್ರೀಡೆಯನ್ನು ತ್ಯಜಿಸುವುದಾಗಿ ಘೋಷಿಸಿದ್ದರೆ, ಬಜರಂಗ್ ಪೂನಿಯಾ ಮತ್ತು ವೀರೇಂದರ್‌ ಸಿಂಗ್ ಪದ್ಮಶ್ರೀ ಪ್ರಶಸ್ತಿಗಳನ್ನು ಹಿಂತಿರುಗಿಸಿದ್ದಾರೆ. ಆರೋಪಿಗಳನ್ನು ಬಂಧಿಸಬೇಕು. ಮಹಿಳೆಯರಿಗೆ ಸುರಕ್ಷತೆಯನ್ನು ಖಾತ್ರಿಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.