ಬೆಂಗಳೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರತ್ನ ಭಾರತ ರೈತ ಸಮಾಜದಿಂದ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ರೈತರ ಆತ್ಮಹತ್ಯೆ ತಡೆಗೆ ತಜ್ಞರನ್ನು ಒಳಗೊಂಡ ಸಮಿತಿ ರಚಿಸಬೇಕು. ಸಮಿತಿಯ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು. ಸಣ್ಣ ರೈತರ ಸಾಲ ಮನ್ನಾ ಮಾಡಬೇಕು. ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಸರ್ಕಾರ ನೆರವು ನೀಡಬೇಕು. ಬೆಂಗಳೂರು ದಕ್ಷಿಣ ಹಾಗೂ ಉತ್ತರ ವಿಭಾಗದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳನ್ನು ಕೆಲಸದಿಂದಲೇ ವಜಾ ಮಾಡಬೇಕು. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾವಿನ ಹಣ್ಣಿನ ಜ್ಯೂಸ್ ತಯಾರಿಕಾ ಘಟಕವನ್ನು ಸ್ಥಾಪಿಸಬೇಕು. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು ಎಂದು ಆಗ್ರಹಿಸಿದರು.
ರತ್ನ ಭಾರತ ರೈತ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಎಲ್.ಲಕ್ಷ್ಮಣ್ ಅವರು ಸಚಿವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.