ADVERTISEMENT

ಬಾಕಿ ವೇತನ ನೀಡುವಂತೆ ಆಗ್ರಹ: ಸಾರಿಗೆ ನಿಗಮಗಳ ನೌಕರರ ಒಕ್ಕೂಟದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 16:04 IST
Last Updated 2 ಸೆಪ್ಟೆಂಬರ್ 2024, 16:04 IST
<div class="paragraphs"><p>ಬಂದ್ ಪ್ರತಿಭಟನೆ</p></div>

ಬಂದ್ ಪ್ರತಿಭಟನೆ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಲ್ಲಿ (ಕೆಎಸ್‌ಆರ್‌ಟಿಸಿ) ಕಾರ್ಯನಿರ್ಹಿಸುತ್ತಿರುವ ನೌಕರರ 38 ತಿಂಗಳ ಬಾಕಿ ವೇತನ ನೀಡುವಂತೆ ಆಗ್ರಹಿಸಿ ಸೆಪ್ಟೆಂಬರ್‌ 4ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟ ತಿಳಿಸಿದೆ.

ADVERTISEMENT

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಮಹಾದೇವಯ್ಯ, ‘ಸಾರಿಗೆ ನೌಕರರ ವೇತನ ಪರಿಷ್ಕರಣೆಯಾದ 2020ರ ಜನವರಿ 1ಕ್ಕೆ ಅನ್ವಯವಾಗುವಂತೆ 38 ತಿಂಗಳ ಬಾಕಿ ವೇತನ ಪಾವತಿಸಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆಯನ್ನು ತಕ್ಷಣ ಜಾರಿಗೊಳಿಸಬೇಕು. ಡಾಬಾ, ಹೋಟೆಲ್‌ಗಳಲ್ಲಿ ವಾಹನ ನಿಲ್ಲಿಸುವ ಪದ್ಧತಿ ಸ್ಥಗಿತಗೊಳಿಸಿ, ಉತ್ತಮ ಕ್ಯಾಂಟೀನ್‌ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದ ನಾಲ್ಕು ನಿಗಮಗಳಲ್ಲಿರುವ ಆಡಳಿತ ಸಿಬ್ಬಂದಿಗೆ ಕರ್ತವ್ಯದ ಸಮಯವನ್ನು ಒಂದೇ ರೀತಿಯಾಗಿ ನಿಗದಿಪಡಿಸಬೇಕು. ಸಾರಿಗೆ ನಿಗಮಗಳ ಖಾಸಗೀಕರಣ ಪ್ರಯತ್ನ ನಿಲ್ಲಬೇಕು. ಮಹಿಳಾ ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.