ADVERTISEMENT

ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಜೂನ್ 2023, 16:33 IST
Last Updated 28 ಜೂನ್ 2023, 16:33 IST
ಲಿಂಗತ್ವ ಅಲ್ಪ‍ಸಂಖ್ಯಾತ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿ ನಡೆದ ರಾಷ್ಟ್ರೀಯ ಆಂದೋಲನಕ್ಕೆ ಲಿಂಗತ್ವ ಅಲ್ಪಸಂಖ್ಯಾತ ಕಾರ್ಯಕರ್ತೆ ಅಕ್ಕೈ ಪದ್ಮಸಾಲಿ ಚಾಲನೆ ನೀಡಿದರು
ಲಿಂಗತ್ವ ಅಲ್ಪ‍ಸಂಖ್ಯಾತ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿ ನಡೆದ ರಾಷ್ಟ್ರೀಯ ಆಂದೋಲನಕ್ಕೆ ಲಿಂಗತ್ವ ಅಲ್ಪಸಂಖ್ಯಾತ ಕಾರ್ಯಕರ್ತೆ ಅಕ್ಕೈ ಪದ್ಮಸಾಲಿ ಚಾಲನೆ ನೀಡಿದರು   

ಬೆಂಗಳೂರು: ಲಿಂಗತ್ವ ಅಲ್ಪ‍ಸಂಖ್ಯಾತ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಲು ರಾಷ್ಟ್ರೀಯ ಆಂದೋಲನ ಬುಧವಾರ ಆರಂಭಗೊಂಡಿತು.

ಲಿಂಗತ್ವ ಅಲ್ಪಸಂಖ್ಯಾತ ಕಾರ್ಯಕರ್ತೆ ಅಕ್ಕೈ ಪದ್ಮಸಾಲಿ ಮತ್ತು ಸೌಮ್ಯಾ ಎ. ಚಾಲನೆ ನೀಡಿದರು.

ಲೋಕಸಭೆ, ರಾಜ್ಯಸಭೆ, ರಾಜ್ಯದ ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ‍ಪ್ರಾತಿನಿಧ್ಯ ನೀಡಬೇಕು. ಭಾರತೀಯ ಸಂವಿಧಾನವು ಪ್ರತಿಪಾದಿಸಿರುವ ಮಾನವ ಘನತೆಯನ್ನು ಎತ್ತಿಹಿಡಿಯಲು, ಧ್ವನಿ ಇಲ್ಲದ ಸಮುದಾಯಗಳ ಧ್ವನಿ ಕೇಳಲು ಈ ಪ್ರಾತಿನಿಧ್ಯ ಅಗತ್ಯ ಎಂದು ಆಂದೋಲನ ಮೂಲಕ ಪ್ರತಿಪಾದಿಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.