ADVERTISEMENT

ಸಾರಿಗೆ ನಿಗಮಗಳಲ್ಲಿ ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಮೇ 2025, 16:32 IST
Last Updated 4 ಮೇ 2025, 16:32 IST
   

ಬೆಂಗಳೂರು: ಸಾರಿಗೆ ನಿಗಮಗಳಲ್ಲಿ ತಾಂತ್ರಿಕ ಸಿಬ್ಬಂದಿಯ ಕೊರತೆ ಇದ್ದು, ಶೀಘ್ರ ನೇಮಕಾತಿ ಮಾಡಲು ಸಚಿವ ಸಂಪುಟದ ಅನುಮೋದನೆ ಪಡೆಯಬೇಕು ಎಂದು ಕೆಎಸ್‌ಆರ್‌ಟಿಸಿ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗ್ರಹಿಸಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಈ ಕುರಿತು ಪತ್ರ ಬರೆದಿರುವ ಕ್ರಿಯಾಸಮಿತಿಯು, ‘ನಾಲ್ಕು ನಿಗಮಗಳಲ್ಲಿರುವ ತಾಂತ್ರಿಕ ಸಿಬ್ಬಂದಿಯ ಕೊರತೆ ನೀಗಿಸಬೇಕಿದ್ದರೆ ಈ ಪ್ರಸ್ತಾವವನ್ನು ರಾಜ್ಯ ಸಚಿವ ಸಂಪುಟದ ಮುಂದೆ ಮಂಡಿಸಿ ಒಪ್ಪಿಗೆ ಪಡೆಯಬೇಕು ಎಂದು ಸ್ವತಃ ಸಾರಿಗೆ ಸಚಿವರೇ ಹಿಂದೆ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವ ಮಂಡಿಸಿ ಒಪ್ಪಿಗೆ ಪಡೆಯಬೇಕು’ ಎಂದು ಆಗ್ರಹಿಸಿದೆ.

ಸರ್ಕಾರದ ಅನುಮೋದನೆ ಸಿಕ್ಕಿದ ಕೂಡಲೇ ನೇಮಕಾತಿ ಪ್ರಕ್ರಿಯೆ ನಡೆಸಿ ಸಿಬ್ಬಂದಿ ಕೊರತೆಯನ್ನು ನೀಗಿಸಬೇಕು ಎಂದು ಕ್ರಿಯಾ ಸಮಿತಿಯ ಮುಖಂಡರಾದ ಎಚ್‌.ವಿ. ಅನಂತಸುಬ್ಬರಾವ್‌. ಬಿ. ಜಯದೇವರಾಜೇ ಅರಸು, ಎಚ್.ಡಿ. ರೇವಪ್ಪ, ವೆಂಕಟರಮಣಪ್ಪ, ಸೋಮಣ್ಣ, ಜಗದೀಶ್‌ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.