ಬೆಂಗಳೂರು: ಕನಿಷ್ಠ ₹7,500 ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 28ರಂದು ರಿಚ್‌ಮಂಡ್ ವೃತ್ತ ಬಳಿಯ ಭವಿಷ್ಯ ನಿಧಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಇಪಿಎಸ್–95 ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ಕನಿಷ್ಠ ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಇಪಿಎಸ್ ವ್ಯಾಪ್ತಿಗೆ ಬಾರದ ಹಲವು ನಿವೃತ್ತ ನೌಕರರಿಗೆ ₹ 5 ಸಾವಿರ ನೀಡಬೇಕು. ಹತ್ತು ವರ್ಷಗಳಲ್ಲಿ ಲಕ್ಷಾಂತರ ಇಪಿಎಸ್ ನೌಕರರು ವಯೋಸಹಜ ಹಾಗೂ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಈವರೆಗೂ ಬೇಡಿಕೆ ಈಡೇರಿಸಿಲ್ಲ ಎಂದು ಹೇಳಿದರು.
ನವದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಆಗಸ್ಟ್ 4 ರಿಂದ ಎರಡು ದಿನ ಇಪಿಎಸ್ ನಿವೃತ್ತರ ಆಂದೋಲನ ನಡೆಯಲಿದ್ದು, ಸಾವಿರಾರು ಮಂದಿ ಈ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಈಗಲಾದರೂ ಕೇಂದ್ರ ಉದ್ಯೋಗ ಹಾಗೂ ಕಾರ್ಮಿಕ ಖಾತೆ ಸಚಿವರು ಎಚ್ಚೆತ್ತುಕೊಂಡು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.