ADVERTISEMENT

ಪ್ರೌಢಶಾಲಾ ಸಹಶಿಕ್ಷಕರಿಗೆ ಮುಂಬಡ್ತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಜುಲೈ 2019, 19:21 IST
Last Updated 5 ಜುಲೈ 2019, 19:21 IST
ಬೆಂಗಳೂರಿನಲ್ಲಿ ಶುಕ್ರವಾರ  ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸದಸ್ಯರು ಶಿಕ್ಷಣ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಅವರನ್ನು ಸನ್ನಾನಿಸಿ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ  ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸದಸ್ಯರು ಶಿಕ್ಷಣ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಅವರನ್ನು ಸನ್ನಾನಿಸಿ ಮನವಿ ಸಲ್ಲಿಸಿದರು.   

ಬೆಂಗಳೂರು: ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರಿಗೆ ಪದವಿಪೂರ್ವ ಕಾಲೇಜಿಗೆ ಶೇ 50:50 ಅನುಪಾತದಲ್ಲಿ ಮುಂಬಡ್ತಿ ನೀಡಬೇಕು, ವರ್ಗಾವಣೆಯನ್ನು ತಕ್ಷಣ ಆರಂಭಿಸಬೇಕು ಎಂದು ಒತ್ತಾಯಿಸಲಾಗಿದೆ.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಚ್‌.ಕೆ.ಮಂಜುನಾಥ ಅವರ ನೇತೃತ್ವದಲ್ಲಿ ಶಿಕ್ಷಣ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಅವರನ್ನು ಶುಕ್ರವಾರ ಭೇಟಿ ಮಾಡಿದ ಶಿಕ್ಷಕರು, ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಅನುದಾನಿತ ಶಾಲಾ ಶಿಕ್ಷಕರಿಗೆ ಕಾಲ್ಪನಿಕ ವೇತನ ಬಡ್ತಿ ಮಂಜೂರು ಮಾಡಬೇಕು, ಪ್ರೌಢಶಾಲಾ ಸಹಶಿಕ್ಷಕರ ವೇತನ ತಾರತಮ್ಯ ನಿವಾರಿಸಬೇಕು ಎಂದೂ ಒತ್ತಾಯಿಸಲಾಗಿದೆ. ಒಟ್ಟು 12 ಬೇಡಿಕೆಗಳನ್ನು ಸಚಿವರ ಮುಂದಿಡಲಾಗಿದೆ.

ADVERTISEMENT

ವಿಧಾನ ಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಸಂಘದ ಪದಾಧಿಕಾರಿಗಳಾದ ಸರಸ್ವತಿ, ಲಿಂಗರಾಜು, ತಮ್ಮಣ್ಣ ಗೌಡ, ರಾಜು, ಕೆ.ಎಂ.ವೆಂಕಟೇಶ್‌, ಸಂಪತ್‌ ಕುಮಾರ್‌, ಸರ್ವ ಶಿಕ್ಷಣ ಅಭಿಯಾನದರಾಜ್ಯ ಯೋಜನಾ ನಿರ್ದೇಶಕ ಡಾ.ಎಂ.ಟಿ.ರೇಜು, ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕ ಮಣಿ, ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಮಾದೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.