ಆರ್‌ಎಸ್‌ಎಸ್ (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ನಗರದ ಚಾಮರಾಜಪೇಟೆಯ ಬುಲ್ ಟೆಂಪಲ್ ರಸ್ತೆಯ ದೊಡ್ಡ ಬಸವನಗುಡಿ ದೇವಸ್ಥಾನದ ಎದುರು ಬಿಬಿಎಂಪಿಗೆ ಸೇರಿದ್ದ ಸುಂಕೇನಹಳ್ಳಿ ವಾರ್ಡ್ ಕಚೇರಿ ಕಾರ್ಯನಿರ್ವಹಿಸುತ್ತಿತ್ತು. ಕೆಲವು ಪಟ್ಟಭದ್ರರು ಶಾಮಿಲಾಗಿ ಪಾಲಿಕೆಯ ಕಚೇರಿಯನ್ನೇ ಖಾಲಿ ಮಾಡಿಸಿ ಕಟ್ಟಡವನ್ನು ಆರ್‌ಎಸ್‌ಎಸ್‌ನ ರಾಷ್ಟ್ರೋತ್ಥಾನ ಯೋಗ ಕೇಂದ್ರಕ್ಕೆ ಬಿಟ್ಟುಕೊಡಲಾಗಿದೆ. ಅದನ್ನು ವಾಪಸ್ ಪಡೆಯಬೇಕು ಎಂದು ಪತ್ರಕರ್ತ ಪಾರ್ವತೀಶ ಬಿಳಿದಾಳೆ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸೇರಬೇಕಾದ ಈ ಜಾಗದಲ್ಲಿರುವ ವಿಶಾಲ ಕಟ್ಟಡ ಹಾಗೂ ಉದ್ಯಾನವನ್ನು ಸಂಘಪರಿವಾರದಂಥ ಕೋಮುವಾದಿ ಖಾಸಗಿ ಸಂಸ್ಥೆಗೆ ಬಿಟ್ಟುಕೊಟ್ಟಿರುವುದು ಕಾನೂನು ಬಾಹಿರ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.