ADVERTISEMENT

ಬಿಎಸ್‌ವೈ, ನಿರಾಣಿ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 15:02 IST
Last Updated 15 ಜನವರಿ 2021, 15:02 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ    

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಡಿನೋಟಿಫೈ ಮಾಡಿರುವ ಆರೋಪದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಚಿವ ಮುರುಗೇಶ ಆರ್. ನಿರಾಣಿ ವಿರುದ್ಧ ವಿಚಾರಣೆಹೈಕೋರ್ಟ್ ಅನುಮತಿ ನೀಡಿದ್ದು, ಈ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಕರಣ ದೂರುದಾರ ಉದ್ಯಮಿ ಆಲಂ ಪಾಷಾ ಒತ್ತಾಯಿಸಿದ್ದಾರೆ.

‘2010-11ರಲ್ಲಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿ ಬಳಿಕ ನಕಲಿ ದಾಖಲೆ ಮತ್ತು ನಕಲಿ ಸಹಿ ಬಳಿಸಿ ಆ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹಿಂದಕ್ಕೆ ಪಡೆದಿದ್ದರು. ಈ ಸಂಬಂಧ ನಾನು ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಿದ್ದೆ’ ಎಂದು ಪಾಷಾ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

‘ವಿಚಾರಣೆ ರದ್ದುಪಡಿಸಿಲು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಜನವರಿ 5ರಂದು ವಜಾಗೊಳಿಸಿ ವಿಚಾರಣೆ ಅಂಗೀಕರಿಸಿದೆ’ ಎಂದು ಹೇಳಿದರು.

ADVERTISEMENT

‘ಪ್ರಕರಣದಲ್ಲಿ ಒಂದನೇ ಆರೋಪಿ ಆಗಿರುವ ಮುರುಗೇಶ್ ನಿರಾಣಿ ಅವರನ್ನ ಈಗ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮೀತ್ ಶಾ ಅವರ ಸಂಪರ್ಕ ಇದೆ. ಸಚಿವರಾಗಿದ್ದರೆ ವಿಚಾರಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಆರೋಪಿಗಳಿಬ್ಬರೂ ರಾಜೀನಾಮೆ ನೀಡಬೇಕು. ಕೂಡಲೇ ಅವರನ್ನು ಪೊಲೀಸ್ ವಶಕ್ಕೆ ಪಡೆಯಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.