ADVERTISEMENT

ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರ ರಚಿಸುವಂತೆ ಸರ್ಕಾರಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 14:46 IST
Last Updated 22 ಫೆಬ್ರುವರಿ 2021, 14:46 IST
ಮನವಿಗಳನ್ನು ಉಪ ಮುಖ್ಯಮಂತ್ರಿ ಡಾ.ಸಿ‌.ಎನ್.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್ ಅವರು ಸ್ವೀಕರಿಸಿದರು.
ಮನವಿಗಳನ್ನು ಉಪ ಮುಖ್ಯಮಂತ್ರಿ ಡಾ.ಸಿ‌.ಎನ್.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್ ಅವರು ಸ್ವೀಕರಿಸಿದರು.   

ಬೆಂಗಳೂರು: ಒಕ್ಕಲಿಗರಿಗೆ ಪ್ರವರ್ಗ 3ಎನಲ್ಲಿ ಮೀಸಲಾತಿ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸಬೇಕು ಹಾಗೂ ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರ ರಚಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಮುಖ್ಯಮಂತ್ರಿಗಳಿಗೆ ಬರೆದಿರುವ ಎರಡು ಪ್ರತ್ಯೇಕ ಮನವಿಗಳನ್ನು ಉಪ ಮುಖ್ಯಮಂತ್ರಿ ಡಾ.ಸಿ‌.ಎನ್.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್ ಅವರು ಸ್ವೀಕರಿಸಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮತ್ತು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯಿಂದ ಸ್ವೀಕರಿಸಿದರು.

ಕ್ರೀಡಾ ಸಚಿವ ನಾರಾಯಣಗೌಡ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಹೋರಾಟ ಸಮಿತಿಯ ಅಧ್ಯಕ್ಷ ಡಾ. ವೈ.ಕೆ.ಪುಟ್ಟಸೋಮೇಗೌಡ, ಸದಸ್ಯರು ಹಾಗೂ ಆದಿಚುಂಚನಗಿರಿ ಶಾಖಾಮಠ ಸ್ವಾಮೀಜಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.