
ಪ್ರಜಾವಾಣಿ ವಾರ್ತೆ
ಬೆಂಗಳೂರು: ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗಿ ಚಿಕಿತ್ಸೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದೆ.
ಕೆ.ಸಿ. ಜನರಲ್ ಆಸ್ಪತ್ರೆಗೆ ಡಾ. ಸುರೇಶ್ (9986121101), ಸಿ.ವಿ. ರಾಮನ್ ಜನರಲ್ ಆಸ್ಪತ್ರೆಗೆ ಡಾ.ಕವಿತಾ ಗೌತಮ್ (9008594651), ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಡಾ. ದೇವೆಂದ್ರಪ್ಪ ಕೆ.ಆರ್. (9880571367), ಯಲಹಂಕ ಜನರಲ್ ಆಸ್ಪತ್ರೆಗೆ ಡಾ. ಗಣೇಶ್ (9980025323), ಕೆ.ಆರ್.ಪುರ ಜನರಲ್ ಆಸ್ಪತ್ರೆಗೆ ಡಾ. ಅಶೋಕ್ ರೆಡ್ಡಿ (7022329578) ಹಾಗೂ ವಾಣಿವಿಲಾಸ ಆಸ್ಪತ್ರೆಗೆ ಡಾ. ರವಿಶಂಕರ್ (9449487592) ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಡೆಂಗಿಗೆ ಸಂಬಂಧಿಸಿದ ಮಾಹಿತಿಗೆ ಉಚಿತ ಸಹಾಯವಾಣಿ 1800 425 8330ಕ್ಕೆ ಸಂಪರ್ಕಿಸಿ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.