ಡೆಂಗಿ
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪತ್ತೆ ಸಂಬಂಧ ಆರೋಗ್ಯ ಇಲಾಖೆಯು ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಿದ್ದರಿಂದ ಪ್ರಕರಣಗಳೂ ಅಧಿಕ ಸಂಖ್ಯೆಯಲ್ಲಿ ದೃಢಪಡುತ್ತಿದ್ದು, ಗುರುವಾರ 381 ಮಂದಿ ಡೆಂಗಿ ಪೀಡಿತರಾಗಿರುವುದು ಖಚಿತಪಟ್ಟಿದೆ.
ಡೆಂಗಿ ಪತ್ತೆ ಸಂಬಂಧ 24 ಗಂಟೆಗಳ ಅವಧಿಯಲ್ಲಿ 2,503 ಪರೀಕ್ಷೆಗಳನ್ನು ನಡೆಸಲಾಗಿತ್ತು. ಹೊಸದಾಗಿ ಡೆಂಗಿ ಪೀಡಿತರಾದವರಲ್ಲಿ ನಾಲ್ವರು ಒಂದು ವರ್ಷದೊಳಗಿನವರಾದರೆ, 140 ಮಂದಿ ಒಂದರಿಂದ 18 ವರ್ಷದೊಳಗಿನವರಾಗಿದ್ದಾರೆ. 237 ಮಂದಿ 18 ವರ್ಷ ಮೇಲ್ಪಟ್ಟವರಾಗಿದ್ದಾರೆ.
ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 362 ಡೆಂಗಿ ಪೀಡಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವರ್ಷ ವರದಿಯಾದ ಒಟ್ಟು ಡೆಂಗಿ ಪ್ರಕರಣಗಳ ಸಂಖ್ಯೆ 8,221ಕ್ಕೆ ಏರಿಕೆಯಾಗಿದೆ. ಡೆಂಗಿ ಪೀಡಿತರಲ್ಲಿ ಈವರೆಗೆ ಏಳು ಮಂದಿ ಮೃತಪಟ್ಟಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಸಲಾದ 481 ಪರೀಕ್ಷೆಗಳಲ್ಲಿ 171 ಮಂದಿಗೆ ಡೆಂಗಿ ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 2,463ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.