ADVERTISEMENT

ಡೆಂಗಿ: ಒಂದೂವರೆ ತಿಂಗಳಲ್ಲಿ 325 ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 19:45 IST
Last Updated 16 ಸೆಪ್ಟೆಂಬರ್ 2022, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ನಗರದಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಡೆಂಗಿ ಪ್ರಕರಣಗಳು ಹೆಚ್ಚಳವಾಗಿದ್ದು, ಒಂದೂವರೆ ತಿಂಗಳಲ್ಲಿ 325 ಮಂದಿಗೆ ಡೆಂಗಿ ಜ್ವರ ಬಾಧಿಸಿದೆ.

ಮೊದಲ ಆರು ತಿಂಗಳು ಡೆಂಗಿ ನಿಯಂತ್ರಣದಲ್ಲಿತ್ತು. ಆ ವೇಳೆ ಜ್ವರಕ್ಕೆ ಒಳಪಟ್ಟವರ ಸಂಖ್ಯೆ 350ರ ಗಡಿಯ ಆಸುಪಾಸಿನಲ್ಲಿತ್ತು. ಬಿಸಿಲು–ಮಳೆಯಿಂದಾಗಿ ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ. ಈವರೆಗೆ ನಗರದಲ್ಲಿ ವರದಿಯಾದ ಡೆಂಗಿ ಪ್ರಕರಣಗಳ ಒಟ್ಟು ಸಂಖ್ಯೆ1,161ಕ್ಕೆ ತಲುಪಿದೆ.

ನಗರದಲ್ಲಿ ಈವರೆಗೆ 44,166 ಮಂದಿಯಲ್ಲಿ ಡೆಂಗಿ ಶಂಕೆ ವ್ಯಕ್ತವಾಗಿದೆ. ಅವರಲ್ಲಿ 5,581 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಡೆಂಗಿ ಜ್ವರಕ್ಕೆ ಈ ವರ್ಷ ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ. 903 ಮಂದಿಯಲ್ಲಿ ಚಿಕೂನ್‌ಗುನ್ಯ ಜ್ವರದ ಶಂಕೆ ವ್ಯಕ್ತವಾಗಿದೆ. ಅವರಲ್ಲಿ 22 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. 10 ಮಂದಿಯಲ್ಲಿ ಚಿಕೂನ್‌ಗುನ್ಯ ಜ್ವರ
ದೃಢಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.