ಬೆಂಗಳೂರು: ಮೂರು ದಿನಗಳಿಂದ 12 ಆಸ್ಪತ್ರೆಗಳನ್ನು ಸುತ್ತಿದರೂ ಚಿಕಿತ್ಸೆ ಸಿಗದ 50 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಸಂತಾ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲು ಪತಿ ಬಾಬು ಎಂಬುವರುಸೇಂಟ್ ಮಾರ್ಥಾಸ್, ವಿಕ್ಟೋರಿಯಾ, ಆಶೀರ್ವಾದ ಆಸ್ಪತ್ರೆ, ಕಿಮ್ಸ್, ಮಣಿಪಾಲ್ ಸೇರಿ 12ಆಸ್ಪತ್ರೆಗಳನ್ನು ಸುತ್ತಿದ್ದರು.
ಹಾಸಿಗೆ ಖಾಲಿ ಇಲ್ಲದ ಕಾರಣ ದಾಖಲಿಸಿಕೊಳ್ಳಲು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನಿರಾಕರಿಸಿದ್ದರು. ಶನಿವಾರ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಅವರು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.