ಬೆಂಗಳೂರು: ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ನ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಶವಂತಪುರದ ಕೆ.ಎಲ್.ಇ ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಸೌಮ್ಯಾ (20) ಆತ್ಮಹತ್ಯೆ ಮಾಡಿಕೊಂಡವರು.
ಹೆಬ್ಬಾಳದ ಸುಮಂಗಲಿ ಸೇವಾಶ್ರಮದ ರಸ್ತೆಯ ವಿಕ್ಟರಿ ಹಾರ್ಮೊನಿ ಆಪಾರ್ಟ್‌ಮೆಂಟ್‌ನಲ್ಲಿ ಪೋಷಕರ ಜತೆಗೆ ವಿದ್ಯಾರ್ಥಿನಿ ವಾಸಿಸುತ್ತಿದ್ದರು. ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಕಾಲೇಜಿನಲ್ಲಿ ಪರೀಕ್ಷೆ ಇತ್ತು. ಸೌಮ್ಯಾ ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.