ಬೆಂಗಳೂರು: ಬೈಕ್‌ಗೆ ಟೆಂಪೊ ಡಿಕ್ಕಿಯಾಗಿದ್ದರಿಂದ ಮೊಹಮ್ಮದ್ ಮತಿನ್ (21) ಎಂಬುವರು ಮೃತಪಟ್ಟಿದ್ದಾರೆ. ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ದಂತವೈದ್ಯಕೀಯ ವಿದ್ಯಾರ್ಥಿಯಾಗಿರುವ ಮತಿನ್ ಗುರುವಾರ ರಾತ್ರಿ 8.30ರ ಸುಮಾರಿಗೆಸ್ನೇಹಿತೆ ಜೊತೆ ಯಶವಂತಪುರದಲ್ಲಿರುವ ಮನೆಗೆ ಮರಳುತ್ತಿದ್ದರು. ಸಿ.ವಿ.ರಾಮನ್ ರಸ್ತೆ ಬಳಿ ಅಪಘಾತ ನಡೆದಿದೆ. ಮತಿನ್ ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.